ರಾಜ್ಯ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ರೀಟಾ

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ  ೯ ವರ್ಷದ ರೀಟಾ ಎಂಬ ಹೆಣ್ಣಾನೆ ಗಂಡು ಮರಿಯಾನೆಗೆ ಜನ್ಮ ನೀಡಿದ್ದು, ಇಡೀ ಉದ್ಯಾನವನದಲ್ಲಿ ಸಂತೋಷ ಮನೆ ಮಾಡಿದೆ. ಸಫಾರಿಯ ಸೀಗೆಕಟ್ಟೆಯಲ್ಲಿ ಈ ಮರಿಯಾನೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದು, ಇದೇ ಮೊದಲ ಬಾರಿಗೆ ಮರಿಯಾನೆಗೆ ರೀಟಾ ಜನ್ಮ ನೀಡಿದ್ದಾಳೆ.

ಇನ್ನು ಪಶು ವೈದ್ಯರು ಹಾಗೂ ಸಿಬ್ಬಂದಿಯ ಆರೈಕೆಯಲ್ಲಿ ತಾಯಿ ಆನೆ ಹಾಗೂ ಮರಿ ಆನೆ ಆರೋಗ್ಯವಾಗಿದ್ದು, ಮರಿಯಾನೆ ಜನನದ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ ೨೭ಕ್ಕೆ ಏರಿಕೆಯಾಗಿದೆ. ಇನ್ನು ಈ ೨೭ ಆನೆಗಳ ಪೈಕಿ ೧೨ ಗಂಡು ಆನೆಗಳು ಇದ್ದರೆ, ೧೫ ಹೆಣ್ಣಾನೆಗಳು ಇವೆ. ಇನ್ನು ಉದ್ಯಾನವನಕ್ಕೆ ಬರುವ ಪ್ರವಾಸಿಗರು ಈ ಮರಿಯಾನೆಯನ್ನ ನೋಡಿ ಖುಷಿ ಪಡುತ್ತಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

40 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

1 hour ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago