ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ತಾವು ಅರಣ್ಯ ಸಚಿವರಾಗಿದ್ದಾಗಲೇ ಈ ಯೋಜನೆ ರೂಪಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಪ್ರಸ್ತಾವ ತಿರಸ್ಕರಿಸಿತ್ತು ಎಂದಿದ್ದಾರೆ.
ತೋಟಗಳಲ್ಲೇ ಹುಟ್ಟಿ ಬೆಳೆಯುವ ಆನೆಗಳನ್ನು ಆನೆಧಾಮದಲ್ಲಿ ಇರಿಸಿದರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದು, ಪರಿಹಾರ ಒದಗಿಸುವ ವಿಶ್ವಾಸವಿದೆ ಎಂದಿದ್ದಾರೆ.
ಬೆಂಗಳೂರು: ಕೆಆರ್‌ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ…
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…
ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆಯೂ ಬಂದಿದೆ. ನವೆಂಬರ್ 24 ಮತ್ತು 25ರಂದು ಬೆಂಗಳೂರು ಸೇರಿದಂತೆ ದಕ್ಷಿಣ…
ರಾಜ್ಯದ ಕೆಲವು ಹೋಟೆಲ್ಲುಗಳಲ್ಲಿ ಗ್ರಾಹಕರಿಗೆ ಕುಡಿಯಲು ನೀರು ಕೊಡದೇ ಬಾಟಲ್ ನೀರು ಖರೀದಿಸುವಂತೆ ಹೇಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ…
ರಾಗಿಮುದ್ದೆ ಕರ್ನಾಟಕದ ಸಾಂಪ್ರದಾಯಿಕ ಆಹಾರ. ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ರಾಗಿಮುದ್ದೆ ರಾಷ್ಟ್ರಮಟ್ಟದಲ್ಲಿ ಪರಿಚಯಗೊಂಡಿತ್ತು. ಆದರೂ ಅದರ ಬಳಕೆ ವ್ಯಾಪಕವಾಗಿರಲಿಲ್ಲ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರೂ…