ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್ ಅವರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಕುಳಿತಿದ್ದರು. ಆದರೆ ಈಗ ಅವರ ವಿರುದ್ಧ ಕೋವಿಡ್ ಹಗರಣದ ಆರೋಪ ಹೊರಿಸಲಾಗಿದೆ. ರಾಜ್ಯಪಾಲರ ಮೇಲೆ ಸರ್ಕಾರ ಸೇಡು ತೀರಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯದಲ್ಲಿ ಅವರ ಅಧಿಕಾರ ಕಿತ್ತುಕೊಳ್ಳಲು ಪ್ರಯತ್ನ ನಡೆಸಲಾಗಿದೆ. ಕಾಂಗ್ರೆಸ್ ಶಾಶ್ವತವಾಗಿ ಅಧಿಕಾರದಲ್ಲಿ ಇರಲಿದೆ ಎಂಬ ಚಿಂತನೆಯಲ್ಲಿದೆ. ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು.
ಶಾಸಕ ಮುನಿರತ್ನ ಬಿಜೆಪಿಗೆ ಮುನ್ನ ಕಾಂಗ್ರೆಸ್‌ನಲ್ಲೇ ಇದ್ದರು. ಅವರು ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್ ನಾಯಕರೇ ಅವರನ್ನು ಬೆಂಬಲಿಸಿದ್ದರು. ರಾಯಚೂರಿನಲ್ಲಿ ಪಿಎಸ್‌ಐ ಕುಟುಂಬದವರು 16 ಗಂಟೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಿದಾಗ ಶಾಸಕರನ್ನು ಬಂಧಿಸಲಿಲ್ಲ. ಕೃಷಿ ಅಧಿಕಾರಿ ವೀಡಿಯೋ ಮಾಡಿ ಕಳುಹಿಸಿದಾಗ ಸಚಿವರನ್ನು ಬಂಧನ ಮಾಡಿಲ್ಲ. ಮುನಿರತ್ನ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಏಕಾಏಕಿ ಬಂಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಅವರ ವಿರುದ್ಧ 65 ಪ್ರಕರಣಗಳಿತ್ತು. ಆದರೆ ಅವರು ಮಾತ್ರ ಶುದ್ಧ ಎನ್ನಲಾಗುತ್ತದೆ. ಬಿಜೆಪಿಯವರು ಸಂವಿಧಾನದ ಬಗ್ಗೆ ಸಣ್ಣ ಮಾತು ಹೇಳಿದ್ದಕ್ಕೆ, ಅದನ್ನೇ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಲಾಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಮೀಸಲು ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಈ ಕುರಿತು ಕಾಂಗ್ರೆಸ್ ಪ್ರತಿಭಟನೆ ಮಾಡಲಿ ಎಂದರು.
ಸೋಲುವ ಭಯ
ಜವಹರಲಾಲ್ ನೆಹರೂ ಅಧಿಕಾರದಲ್ಲಿದ್ದಾಗ ಏಕಕಾಲಕ್ಕೆ ಚುನಾವಣೆ ನಡೆಯುತ್ತಿತ್ತು. ಈಗ ಅದನ್ನೇ ಎನ್‌ಡಿಎ ಸರ್ಕಾರ ಮಾಡಲು ಹೊರಟರೆ ತಪ್ಪು ಎನ್ನಲಾಗುತ್ತಿದೆ. ಇಡೀ ವರ್ಷ ಚುನಾವಣೆ ನಡೆಯುವುದನ್ನು ತಪ್ಪಿಸಲು ಒಂದೇ ಬಾರಿಗೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಉಳಿತಾಯವಾದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು. ಆದರೆ ಈ ರೀತಿ ಮಾಡಿದರೆ ಸೋಲುತ್ತೇವೆ ಎಂಬ ಭಯ ಕಾಂಗ್ರೆಸ್‌ಗಿದೆ. ಆದ್ದರಿಂದ ಈ ಹೊಸ ವ್ಯವಸ್ಥೆಯನ್ನು ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂದರು.
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…