ರಾಜ್ಯ

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಕರವೇ ನಾರಾಯಣಗೌಡ

ಬೆಂಗಳೂರು: ಕಳೆದ ವರ್ಷ ಡಿಸೆಂಬರ್.‌27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳುವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ ಅಂದರೆ ಜುಲೈ.1ರಂದು ರಾಜ್ಯಾದ್ಯಂತ ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲಿದೆ. ಸಾವಿರಾರು ಕರವೇ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರದೇ ಸಿಂಹಪಾಲು ಇರಬೇಕೆಂಬುದು ನ್ಯಾಯಯುತವಾದ ಬೇಡಿಕೆ. ಇದಕ್ಕಾಗಿಯೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ದೊಡ್ಡದಾಗಿ ಬೆಳೆದ ಹಿನ್ನೆಲೆಯಲ್ಲಿ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗವಿಲ್ಲದೇ ಬಳಲುವಂತಾಗಿದೆ.

ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗವನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳುವಳಿಗೆ ಸಜ್ಜಾಗಿದೆ ಎಂದು ನಾರಾಯಣಗೌಡ ಹೇಳಿದ್ದಾರೆ.

ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಕಾಲ ಮಿಂಚಿ ಹೋಗುತ್ತದೆ. ನಾವು ಮಾಡಿದ ತಪ್ಪುಗಳಿಗಾಗಿ ನಮ್ಮ ಬೇಜಾವಾಬ್ದಾರಿಗೆ ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಶಪಿಸುವ ಕಾಲ ಬರುತ್ತದೆ. ಹೀಗಾಗಿ ಕನ್ನಡಿಗರನ್ನು, ಕನ್ನಡಿಗರ ಬದುಕನ್ನು ಉಳಿಸುವ ಕಾರ್ಯವನ್ನು ನಾವು ಮಾಡಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ.1ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago