ಮೈಸೂರು: ಕೈಗಾರಿಕೆಗಳಿಗೆ ಸರ್ಕಾರ ಸರ್ಕಾರಿ ಜಮೀನು, ಖಾಸಗಿ ಭೂಮಿ,ನೀರು,ವಿದ್ಯುತ್ ಎಲ್ಲವನ್ನೂ ನೀಡಿದೆ ಹಾಗೂ ಪರವಾನಗಿ ನೀಡುವಾಗ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಷರತ್ತನ್ನೂ ವಿಧಿಸಿರುತ್ತದೆ ಹಾಗಾಗಿ ಎಲ್ಲಾ ಕೈಗಾರಿಕೆಗಳು, ಉದ್ದಿಮೆದಾರರು ಕಡ್ಡಾಯವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಉದ್ದಿಮೆದಾರರ ಸಭೆಯಲ್ಲಿ ಮಾತನಾಡಿದ ಅವರು,ಸ್ಥಳೀಯರಿಗೆ ಉದ್ಯೋಗ ನೀಡುವುದು ನಿಮ್ಮ ಕರ್ತವ್ಯ, ಕೈಗಾರಿಕೆಗಳಿಗೆ ಭೂಮಿ ಕಳೆದುಕೊಂಡಿರುವವರಿಗೆ ಶಾಶ್ವತ ಉದ್ಯೋಗ ನೀಡಬೇಕು, ಅವರಿಗೆ ಯಾವುದೇ ಕಾರಣಕ್ಕೂ ಬಾಹ್ಯ ಗುತ್ತಿಗೆ ಅಥವ ತಾತ್ಕಾಲಿಕ ಉದ್ಯೋಗ ನೀಡಬಾರದು ಈ ಮೂಲಕ ಸರ್ಕಾರದ ಉದ್ದೇಶ ಈಡೇರಬೇಕು ಎಂದರು.
ಹಲವರು ಉದ್ಯೋಗ ನೀಡಿದ್ದೀರಿ,ಕೆಲ ಕಂಪನಿಗಳಲ್ಲಿ ಉದ್ಯೋಗ ನೀಡಿಲ್ಲ ಎಂದು ಸ್ಥಳೀಯರು ಮನವಿ ಸಲ್ಲಿಸುತಿದ್ದಾರೆ,ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹಲವರು ಉದ್ಯೋಗ ನೀಡಲು ಒಪ್ಪಿಗೆ ನೀಡಿದ್ದರಿ,ಯಾರು ಉದ್ಯೋಗ ನೀಡಿಲ್ಲವೋ ಅವರು ಈ ತಿಂಗಳೊಳಗಾಗಿ ಉದ್ಯೋಗ ನೀಡಿ ಎಂದರು.
ನಂಜನಗೂಡು, ಚಾಮುಂಡೇಶ್ವರಿ,ವರುಣ ಹಾಗೂ ಹಿಮ್ಮಾವು ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ ಎಂಬ ದೂರುಗಳಿವೆ ಹಾಗಾಗಿ ಸಂಬಂಧಿಸಿದ ವರು ತಕ್ಷಣ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕೆಂದರು.
ತಾಂತ್ರಿಕ ನೈಪುಣ್ಯತೆಯುಳ್ಳ ಕಾರ್ಮಿಕರು ಸ್ಥಳೀಯವಾಗಿ ಲಭ್ಯವಿಲ್ಲದಿದ್ದರೆ ಮಾತ್ರ ಹೊರಗಿನವರನ್ನು ತೆಗೆದುಕೊಳ್ಳಿ ಹಾಗೂ ಸ್ಥಳೀಯರಿಗೆ ತರಬೇತಿ ನೀಡುವ ಮೂಲಕ ತಾಂತ್ರಿಕ ಪರಿಣತರನ್ನಾಗಿಸಿ ಎಂದರು.
ನಮ್ಮಲ್ಲಿ ಮಾನವ ಸಂಪನ್ಮೂಲ ಕ್ಕೆ ಕೊರತೆಯಿಲ್ಲ,ಐಟಿಐ ಡಿಪ್ಲೊಮಾ, ಪದವಿ ಪಡೆದಿರುವವರು ಸಾಕಷ್ಟು ಸಂಖ್ಯೆಯಲ್ಲಿದ್ದು ಸರ್ಕಾರದಿಂದ ಕೌಶಲ ತರಬೇತಿ ನೀಡಿ ಪರಿಣಿತರನ್ನಾಗಿಸುತ್ತಿದೆ, ಇದರೊಂದಿಗೆ ತಾವು ತಮ್ಮ ಕಂಪನಿಗಳಲ್ಲಿರುವವರಿಗೆ ತರಬೇತಿ ನೀಡಿ ಕುಶಲಕರ್ಮಿಗಳನ್ನಾಗಿ ಮಾಡಿ ಎಂದರು.
ಕೆಲವು ಕಾರ್ಖಾನೆಗಳಲ್ಲಿ ಕಾರ್ಮಿಕ ಸಂಘಗಳನ್ನು ಹತ್ತಿಕ್ಕುವ ಮೂಲಕ ಕಂಪನಿಯವರೇ ತಮ್ಮ ಪರವಾನಗಿ ಬೇರೊಂದು ಸಂಘ ಹುಟ್ಟುಹಾಕುತ್ತಿದ್ದೀರಿ ಎಂಬ ದೂರುಗಳಿವೆ ಯಾವುದೇ ಕಾರಣಕ್ಕೂ ಹಾಗಾಗಬಾರದು.ಸಂಘ ಕಟ್ಟಿಕೊಳ್ಳುವುದು ಅವರ ಸಾಂವಿಧಾನಿಕ ಹಕ್ಕು ಉದ್ದೇಶ ಪೂರ್ವಕವಾಗಿ ತೊಂದರೆ ಮಾಡಿದರೆ ಕಾರ್ಮಿಕ ಇಲಾಖೆಯಿಂದ ತಾವು ನ್ಯಾಯ ಪಡೆಯಬಹುದೆಂದರು.
ಯಾವುದೇ ರಾಜ್ಯ, ರಾಷ್ಟ್ರ ಮುಂದುವರಿಯಬೇಕಾದರೆ ಕೃಷಿಯ ನಂತರದ ಸ್ಥಾನ ಕೈಗಾರಿಕೆಗಳದ್ದು, ನಾವು, ನೀವು ಕಾರ್ಮಿಕರು ಸೇರಿ ಕಾರ್ಯನಿರ್ವಹಿಸಿದರೆ ರಾಜ್ಯದ ಜಿಡಿಪಿ ಬೆಳವಣಿಗೆ ಆಗುತ್ತದೆ ಹಾಗಾಗಿ ಕೈಗಾರಿಕೆಗಳ ಬೆಳವಣಿಗೆಗೆ ಒತ್ತು ನೀಡಬೇಕಾಗಿದೆ ಎಂದರು
ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು ಆ ಮೂಲಕ ನಿರುದಯೋಗಿಗಳಿಗೆ ಎರಡು ವರ್ಷಗಳ ಕಾಲ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದ್ದು 2024 ರ ಜನವರಿ 12 ರಂದು ಚಾಲನೆ ನೀಡಲಾಗುತ್ತಿದೆ. ಒಟ್ಟಾರೆಯಾಗಿ ನಮ್ಮ ಸರ್ಕಾರ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…