Employment opportunities
ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5495 ಕೋಟಿ ರೂ. ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…