eshwar khandre (1)
ಬೆಂಗಳೂರು : ಪರಿಸರಕ್ಕೆ ಮತ್ತು ಜಲ ಮೂಲಗಳಿಗೆ ಮಾರಕವಾದ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪ ಮತ್ತು ಗೌರಿಯ ಮೂರ್ತಿಗಳ ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಓಪಿ ಗಣೇಶ ವಿಗ್ರಹಗಳನ್ನು ಕ್ಯಾಲ್ಷಿಯಂ, ಸಲ್ಛೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುತ್ತವೆ. ಇಂತಹ ಮೂರ್ತಿಗಳಿಗೆ ಪಾದರಸ, ಕ್ಯಾಡಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಹೀಗಾಗಿ ಜನ ಜಾಗೃತಿ ಮೂಡಿಸಲು ಪರಿಸರ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಈ ಹಿಂದೆ ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮಾಡದಂತೆ ಸುತ್ತೋಲೆ ಹೊರಡಿಸಲಾಗುತ್ತಿತ್ತು. ತಾವು ಸಚಿವರಾದ ಬಳಿಕ ೨೦೨೩ರಲ್ಲಿ ಪಿಓಪಿ ಮೂರ್ತಿ ತಯಾರಿಕೆ, ಮಾರಾಟ ನಿಷೇಧಿಸಿ ಸರ್ಕಾರಿ ಆದೇಶವನ್ನೇ ಹೊರಡಿಸಲಾಗಿದೆ. ಇದನ್ನು ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದರು.
ಗೌರಿ, ಗಣೇಶ ಹಬ್ಬಕ್ಕೆ ಇನ್ನೂ ಒಂದು ತಿಂಗಳಿದ್ದು, ಈಗಿನಿಂದಲೇ ಪಿಓಪಿ ಗೌರಿ, ಗಣಪತಿ ಮೂರ್ತಿಗಳ ಸಾಗಾಟ, ದಾಸ್ತಾನು ಮಾಡದಂತೆ ನಿಯಂತ್ರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…