ರಾಜ್ಯ

ಅನಧಿಕೃತ ಬಡಾವಣೆಗಳಿಗೆ ಅಂತ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇವೆ. ಈಗ ಇವುಗಳಿಗೆ ನಾವು ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶವಿಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ. ಅಧಿಕಾರಿಗಳು ಅರ್ಥಮಾಡಿಕೊಂಡು ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ಜಾಗರೂಕರಾಗಿರಬೇಕು ಎಂದು ತಿಳಿಸಿದರು.

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರೀಕ ಸವಲತ್ತು ಸಿಗುತ್ತಿಲ್ಲ. ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡುತ್ತೇವೆ ಎಂದು ತಿಳಿಸಿದರು.

3 ತಿಂಗಳೊಳಗೆ ಎಲ್ಲರಿಗೂ ಖಾತೆ ನೀಡಿ, ಅನಿಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ. ಅನಧಿಕೃತ ಬಡಾವಣೆಗಳು ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರಾ ಯೋಜನಾ ಅಧಿಕಾರಿಗಳು ಜವಬ್ದಾರರಾಗುತ್ತೀರಿ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸೂಚಿಸಿದರು.

ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರು ಈ ಕುರಿತು ಸ್ಪಷ್ಟಪಡಿಸಿದ್ದೇವೆ. ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ. ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರುಮಾಡಿ ಎಂದು ಸೂಚಿಸಿದರು.

 

ಆಂದೋಲನ ಡೆಸ್ಕ್

Recent Posts

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

19 mins ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

1 hour ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

1 hour ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

1 hour ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

4 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

4 hours ago