ರಾಜ್ಯ

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ : ರಾಜ್ಯದ 18 ಕಡೆ ಇಡಿ ದಾಳಿ

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಬಿಎಂಎಸ್ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇಡಿ ದಾಳಿ ಮಾಡಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, ಬೆಳಿಗ್ಗೆ 6 ಗಂಟೆಯಿಂದ ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡಿದರು.

2021-22 ರಲ್ಲಿ ನಡೆದಿದ್ದ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬಿಎಂಎಸ್ ಕಾಲೇಜಿನ ಟ್ರಸ್ಟ್ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೀಟ್ ಬ್ಲಾಕಿಂಗ್ ಕುರಿತು ರಮೇಶ್ ನಾಯಕ್ ದೂರು ನೀಡಿದ್ದರು. ಹಾಗಾಗಿ ಟ್ರಸ್ಟ್ ಅಧ್ಯಕ್ಷೆ ರಾಗಿಣಿ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಎಐಸಿಟಿಇ, ಯುಜಿಸಿ ನಿಯಮ ಉಲ್ಲಂಘಿಸಿ ಮೆರಿಟ್ ಸೀಟ್ ಹಂಚಿಕೆ ಮಾಡದೆ, ಅಕ್ರಮವಾಗಿ ಏಜೆಂಟ್‌ಗಳ ಮೂಲಕ ಸೀಟ್ ಹಂಚಿಕೆ ಮಾಡಲಾಗಿತ್ತು. ಆ ಮೂಲಕ ಖಾಸಗಿ ಕಾಲೇಜುಗಳು ಕೋಟ್ಯಂತರ ರೂ. ಹಣ ಸಂಗ್ರಹ ಮಾಡಿರುವ ಆರೋಪ ಕೇಳಿಬಂದಿತ್ತು.

ಎರಡನೇ ಬಾರಿಗೆ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ದಾಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ಅಽಕಾರಿಗಳು ದಾಳಿ ಮಾಡಿದ್ದಾರೆ. ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಆರೋಪದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ದಾಳಿ ಮಾಡಿರುವ ಅಽಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದರು.

ಏನಿದು ಸೀಟ್ ಬ್ಲಾಕಿಂಗ್ ದಂಧೆ?
ಸೀಟ್‌ಗಳನ್ನು ಮೊದಲೇ ಕಾಯ್ದಿರಿಸುವುದು ಅಥವಾ ರಿಸರ್ವೇಶನ್ ಪದ್ಧತಿ ಎನ್ನಬಹುದು. ಕೆಲವು ಪ್ರತಿಷ್ಠಿತ ಕಾಲೇಜುಗಳು ಮುಂಬರುವ ಶೈಕ್ಷಣಿಕ ವರ್ಷಕ್ಕೂ ಮೊದಲೇ ಸೀಟ್‌ಗಳನ್ನು ರಿಸರ್ವ್ ಮಾಡುತ್ತವೆ ಎನ್ನಬಹುದು.
ಪ್ರತಿ ವರ್ಷ ಅತ್ಯುತ್ತಮ ಕಾಲೇಜುಗಳಿಗೆ ಸೇರಬೇಕೆಂಬುದು ಮಕ್ಕಳು ಮತ್ತು ಪೋಷಕರಲ್ಲಿ ತವಕ ಹೆಚ್ಚಿದೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳು ಈ ಸೀಟ್ ಬ್ಲಾಕಿಂಗ್ ದಂಧೆ ನಡೆಸಿವೆ.

ಏನಿದು ಪ್ರಕರಣ?
ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಬ್ಬಂದಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿತ್ತು. 2024-25ನೇ ಸಾಲಿಗಾಗಿ ವಿವಿಧ ಸ್ನಾತಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ 13 ರಂದು ಈ ಹಗರಣ ಬೆಳಕಿಗೆ ಬಂದಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

58 mins ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

60 mins ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

1 hour ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

1 hour ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

1 hour ago