ರಾಜ್ಯ

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ
ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು.

ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ವರ್ಕಿಂಗ್ ವುಮೆನ್ಸ್ ಹಾಸ್ಟೆಲ್
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ರೀಲ್ಸ್ ಗೆ ಪ್ರೋತ್ಸಾಹಿಸಿ
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ
ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ಫೋನ್ ಮಾಡಿ ಮಾತನಾಡಿದರು. ಸಹಾಯವಾಣಿ ಸಿಬ್ಬಂದಿಯೊಂದಿಗೆ ಅಪರಿಚಿತರಂತೆ ಮಾತನಾಡಿದ ಸಚಿವರು, ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಸನ್ಮಾನ
ಸಭೆ ಬಳಿಕ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಶಿರಾ ಕ್ಷೇತ್ರದ ಶಾಸಕರೂ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳೂ ಆಗಿರುವ ಟಿ.ಬಿ.ಜಯಚಂದ್ರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಸಿದ್ದೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಮರಿಯಪ್ಪ, ವಿಕಲ ಚೇತನ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪಾ ರಾಯ್ಕರ್ ಸೇರಿದಂತೆ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

5 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

5 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

7 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

7 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

7 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

8 hours ago