ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ.
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ ವಂಚಿಸಲಾಗಿದೆ ಎಂಬ ಆರೋಪದ ಮೇಲೆ ಬಂಧನ ವಾರೆಂಟ್ ಜಾರಿಯಾಗಿತ್ತು. ಈ ಆರೋಪ ವಿಚಾರವಾಗಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಹೊರಡಿಸಿರುವ ರಿಕವರಿ ನೋಟಿಸ್ ಹಾಗೂ ಬಂಧನ ವಾರೆಂಟ್ ಪ್ರಶ್ನಿಸಿ ಉತ್ತಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ರಜಾಕಾಲದ ನ್ಯಾಯಪೀಠವೂ ನ್ಯಾಯಪೀಠವೂ ಬಂಧನ ವಾರೆಂಟ್ ಅನ್ನು ತಡೆ ಹಿಡಿಯಲಾಗಿದೆ ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ರಾಬಿನ್ ಉತ್ತಪ್ಪ ಮೆಸಸ್ ಸೆಂಚುರಿಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪಡೆನಿಗೆ ಪಾಲುದಾರರಾಗಿದ್ದರು. ಈ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅನೇಕ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿಸಿರಲಿಲ್ಲ. ವೇತನದಲ್ಲಿ ಸುಮಾರು 23 ಲಕ್ಷ ರೂ.ಗಳಷ್ಟು ಇಪಿಎಫ್ ಹಣ ಕಡಿತಗೊಳಿಸಿಕೊಂಡು , ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿರುವ ಆರೋಪ ಕೇಳಿ ಬಂದಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…