Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಬೀದರ್‌ ಪ್ರಯಾಣಿಕರ ದುರ್ಮರಣ| ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನ ಹಾಗೂ ಲಾರಿ ಮುಖಾಮುಖಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಐವರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿರುವ ವಿಚಾರ ತಿಳಿದು ಅಘಾತವಾಯಿತು. ಹೀಗಾಗಿ ತಕ್ಷಣ ಬೀದರ್‌ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥಿವ ಶರೀರವನ್ನು ತರಲು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇನ್ನು ಉತ್ತರಪ್ರರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯೊಂದಿಗೆ ಚರ್ಚಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ಹೇಳಿದ್ದೇನೆ. ಅಲ್ಲದೇ ನಮ್ಮ ಸರ್ಕಾರ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!