Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

ಅರಣ್ಯದಲ್ಲಿ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ್‌ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ದೂರದರ್ಶನ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಇನ್ನಿತರ ಯಾವುದೇ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗಧಿತ ಶುಲ್ಕವನ್ನು ವಿಧಿಸಬೇಕು. ಈ ನಿಗಧಿತ ಶುಲ್ಕವನ್ನು ಪಾವತಿಸಿದ ನಂತರವೇ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ.

ಸ್ಥಳೀಯ ಮಟ್ಟದ ಅಧಿಕಾರಿಗಳು ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಅಲ್ಲದೇ ಚಿತ್ರೀಕರಣದಿಂದ ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಹೀಗಾಗಿ ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ.

Tags:
error: Content is protected !!