ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಖಂಡ್ರೆ ಹೇಳಿದ್ದಾರೆ.
ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದಾರೆ ಎಂದೂ ಆರೋಪಿಸಿದ್ದಾರೆ.
ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಖಂಡ್ರೆ ಒತ್ತಾಯಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…