ರಾಜ್ಯ

ಎಚ್ಎಂಟಿ ಡಿನೋಟಿಫಿಕೇಷನ್ : ಗೋಕುಲ್ ಅಮಾನತಿಗೆ ಖಂಡ್ರೆ ಸಮರ್ಥನೆ

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಸಾವಿರ ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ಇಂದಿಗೂ 280 ಎಕರೆಯಷ್ಟು ಅರಣ್ಯವಿದೆ. ಆದರೆ ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ಗೆ ಸುಳ್ಳು ಪ್ರಮಾಣಪತ್ರ ನೀಡಿದ ಅಧಿಕಾರಿಗಳ ನಡೆ, ಕಾನೂನು ಬಾಹಿರವಾಗಿದ್ದು, ಇದು ಸರ್ಕಾರಕ್ಕೆ, 7 ಕೋಟಿ ಜನರಿಗೆ ಮಾಡಿದ ಅಪಚಾರ ಮತ್ತು ದ್ರೋಹ. ಹೀಗಾಗಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ. ಇದಕ್ಕೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಅದು ರಾಜ್ಯಕ್ಕೆ ಮಾಡುವ ದ್ರೋಹ ಎಂದರು.

ಬನ್ನೇರುಘಟ್ಟದಲ್ಲಿ ಪ್ರಥಮ ಇ.ವಿ. ಸಫಾರಿ ಬಸ್:
ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಇಲಾಖೆ ಪ್ರಯತ್ನಶೀಲವಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ಇ.ವಿ. – ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಾಳೆ ಈ ವಾಹನಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ನಾಳೆ ಸಚಿವ ಸಂಪುಟದ ಸಭೆ ಇದ್ದು, ಕೇರಳ ರಾಜ್ಯದ ಅರಣ್ಯ ಸಚಿವರು ಭೇಟಿಯಾಗಲು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಇ.ವಿ. ಸಫಾರಿ ವಾಹನಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

2 mins ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

25 mins ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

37 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

54 mins ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

1 hour ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

1 hour ago