eshwar khandre
ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಸಾವಿರ ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ಇಂದಿಗೂ 280 ಎಕರೆಯಷ್ಟು ಅರಣ್ಯವಿದೆ. ಆದರೆ ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ಗೆ ಸುಳ್ಳು ಪ್ರಮಾಣಪತ್ರ ನೀಡಿದ ಅಧಿಕಾರಿಗಳ ನಡೆ, ಕಾನೂನು ಬಾಹಿರವಾಗಿದ್ದು, ಇದು ಸರ್ಕಾರಕ್ಕೆ, 7 ಕೋಟಿ ಜನರಿಗೆ ಮಾಡಿದ ಅಪಚಾರ ಮತ್ತು ದ್ರೋಹ. ಹೀಗಾಗಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ. ಇದಕ್ಕೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಅದು ರಾಜ್ಯಕ್ಕೆ ಮಾಡುವ ದ್ರೋಹ ಎಂದರು.
ಬನ್ನೇರುಘಟ್ಟದಲ್ಲಿ ಪ್ರಥಮ ಇ.ವಿ. ಸಫಾರಿ ಬಸ್:
ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಇಲಾಖೆ ಪ್ರಯತ್ನಶೀಲವಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ಇ.ವಿ. – ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ನಾಳೆ ಈ ವಾಹನಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ನಾಳೆ ಸಚಿವ ಸಂಪುಟದ ಸಭೆ ಇದ್ದು, ಕೇರಳ ರಾಜ್ಯದ ಅರಣ್ಯ ಸಚಿವರು ಭೇಟಿಯಾಗಲು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಇ.ವಿ. ಸಫಾರಿ ವಾಹನಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…