ರಾಜ್ಯ

ಐಟಿ, ಇಡಿಯನ್ನು ಬಿಜೆಪಿ ಮೋರ್ಚಾ ಮಾಡಿಕೊಂಡಿದೆ : ಈಶ್ವರ ಖಂಡ್ರೆ

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, ನಂತರ ಸಾಕಷ್ಟು ಬದಲಾವಣೆ ಆಗಿದೆ ಎಂಬುದು ಜನರ ಅಭಿಪ್ರಾಯವಾಗಿತ್ತು. ಇದಕ್ಕೆ ಅನುಗುಣವಾಗಿ ನ್ಯೂನತೆಗಳನ್ನು ಸರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈಗ ಪ್ರತಿಪಕ್ಷಗಳು ಸರ್ಕಾರದ ನಿರ್ಧಾರ ಟೀಕಿಸುತ್ತಿವೆ. ಬಿಜೆಪಿ 5 ವರ್ಷ ಅಧಿಕಾರದಲ್ಲಿತ್ತು. ಆಗ ಏಕೆ ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದರು.

ಸ್ವಾಯತ್ತ ಸಂಸ್ಥೆಗಳ ದುರುಪಯೋಗ:
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ., ಐ.ಟಿ., ಸಿಬಿಐನಂತಹ ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯ ದುರುದ್ದೇಶಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ನ್ಯಾಯಾಲಯಗಳು ಕೂಡ ಹಲವು ಬಾರಿ ಎಚ್ಚರಿಕೆ ನೀಡಿವೆ ಎಂದರು.

ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿಯು ತನ್ನ ಒಂದು ಮೋರ್ಚಾದಂತೆ ವರ್ತಿಸುವಂತೆ ಮಾಡಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

5 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

7 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago