Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬಿಜೆಪಿ ತಮ್ಮ ಅವಧಿಯಲ್ಲಿನ ಹಗರಣ ಮುಚ್ಚಿಹಾಕಲು ಪಾದಯಾತ್ರೆ ಮಾಡುತ್ತಿದ್ದಾರೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವನ್ನು ಮುಚ್ಚಿಹಾಕಲು ಬಿಜೆಪಿ-ಜೆಡಿಎಸ್‌ ಈ ರೀತಿಯಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್‌ ಖಂಡ್ರೆ, ಬಿಜೆಪಿ ಯಾವ ಆಧಾರದ ಮೇಲೆ ಪಾದಯಾತ್ರೆ ಮಾಡಲು ಮುಂದಾಗಿದೆ. ತಮ್ಮ ಅಧಿಕಾರಾವಧಿಯಲ್ಲಿನ ಹಗರಣ ಮುಚ್ಚಿಡಲು ಮುಂದಾಗಿದ್ದು, ಈ ಪ್ರಕರಣದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ ತರಲು ಯತ್ನಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಜನಸಮುದಾಯದ ಅಪರೂಪದ ರಾಜಕಾರಣಿ ಎಂದು ಈಶ್ವರ್‌ ಖಂಡ್ರೆ ತಿಳಿಸಿದರು.

Tags: