ರಾಜ್ಯ

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಡ್ರೋನ್‌ ಕ್ಯಾಮೆರಾ ಅಳವಡಿಕೆ: ಸಚಿವ ಈಶ್ವರ್‌ ಖಂಡ್ರೆ

ಬೀದರ್: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್‌ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಬೀದರ್‌ನಲ್ಲಿ ಇಂದು(ಡಿಸೆಂಬರ್.31)‌ ಈ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇನ್ಫೋಸಿಸ್‌ ಕ್ಯಾಂಪಸ್‌ ಸುತ್ತ ಚಿರತೆ ಓಡಾಡಿರುವುದು ಸಿಸಿ ಕ್ಯಾಮರಾದ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಹೀಗಾಗಿ ತುರ್ತು ಕಾರ್ಯಚರಣೆ ನಡೆಸಿ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ಈ ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಚಿರತೆ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡ ನಂತರ ಎಚ್ಚೆತ್ತ ಸಂಸ್ಥೆಯೂ ಮುನ್ನಚ್ಚೆರಿಕೆ ಕ್ರಮವಾಗಿ ಸಿಬ್ಬಂದಿಗಳಿಗೆ ರಜೆಯನ್ನು ಘೋಷಿಸಿ, ಉದ್ಯೋಗಿಗಳಿಗೆ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಪತ್ತೆಗೆ ಥರ್ಮಲ್‌ ಕ್ಯಾಮರಾ ಅಳವಡಿಸಿದ ಡ್ರೋನ್‌ ಬಳಸಲಾಗುತ್ತಿದ್ದು ಬಲೆ, ಅರವಳಿಕೆ ಔಷಧದೊಂದಿಗೆ ಚಿರತೆ ಸೆರೆಗೆ ಸಜ್ಜಾಗಿದ್ದಾರೆ. ಅಲ್ಲದೇ ಶೀಘ್ರವೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲಿದ್ದಾರೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

2 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

4 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

4 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

5 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

6 hours ago