ರಾಜ್ಯ

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಶನಿವಾರ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17 ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು
ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆ ಅಗತ್ಯ
ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.

ಶಿಕ್ಷೆ ಪ್ರಮಾಣದರದಲ್ಲಿ ಕರ್ನಾಟಕಕ್ಕೆ 22 ನೇ ಸ್ಥಾನ
ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87% ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, , ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕಿವಿ ಮಾತು ಹೇಳಿದರು.

ನ್ಯಾಯ ಎತ್ತಿ ಹಿಡಿಯುವ ಪ್ರಯತ್ನವನ್ನು ಅಭಿಯೋಜಕರು ಮಾಡಬೇಕು
ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ , ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಭರವಸೆ
ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು ಎಂದ ಮುಖ್ಯಮಂತ್ರಿಗಳು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂಬ ಆಶ್ವಾಸನೆಯಿತ್ತರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕರಾದ ಡಾ: ಎಂ. ಎ.ಸಲೀಂ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿ ದೇವಿ ರಾಜ್ಯ ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥನಾರಾಯಣ್,ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

2 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

2 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

2 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

2 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

2 hours ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

2 hours ago