ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ.
ಕಲಬುರ್ಗಿ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರ್ಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ಭಾಷಣದಲ್ಲಿ ಕೇಳಿದಂತೆ, ಕಲಬುರ್ಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಅವರಿಗೆ ಸೂಚನೆ ನೀಡಲಾಗುವುದು. ಸಾಂಸ್ಕೃತಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದೆ. ಹೀಗಾಗಿ ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…