ರಾಜ್ಯ

ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ಎಂಎಲ್‌ಸಿ ಕೆ. ಶಿವಕುಮಾರ್‌ ಘೋಷಣೆ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಅವರು ಘೋಷಿಸಿದರು.

ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.

ಇದನ್ನು ಓದಿ: ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್‌ ಅವರು ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು, ಶಿವಕುಮಾರ್‌ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ.ವೆಂಕಟೇಶ್‌, ಶಿವಾನಂದ ತಗಡೂರು, ಅಬ್ಬಾಸ್‌ ಮುಲ್ಲಾ ಮೊದಲಾದವರು ಶಿವಕುಮಾರ್‌ ಅವರ ಕುರಿತು ಮಾತನಾಡಿದರು.

ಆಂದೋಲನ ಡೆಸ್ಕ್

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

32 mins ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

42 mins ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

49 mins ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

55 mins ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

60 mins ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

1 hour ago