ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೆಟ್ರೋ ದರ ಹೆಚ್ಚಳ : ಸರ್ಕಾರದ ಪಾತ್ರವಿಲ್ಲ
ಮೆಟ್ರೋ ದರ ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.
ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ
ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.
ಇನ್ನೆರಡು ಸಚಿವ ಸ್ಥಾನ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಗಣನೆ
ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಾವು ಸಚಿವರನ್ನು ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ರಾಜೀನಾಮೆ: ಸತ್ಯಕ್ಕೆ ದೂರವಾದ ಸಂಗತಿ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
ಬಜೆಟ್ ಮಂಡನೆ ದಿನಾಂಕ ; ಶೀಘ್ರ ಘೋಷಣೆ
ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…