Mysore
22
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮಹಿಳಾ ಆಯೋಗ ಘಟನೆ ಸ್ಥಾಪನೆ

ಬೆಂಗಳೂರು: ಮಹಿಳೆಯರಿಗೆ ನೆರವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

ಮಹಿಳೆಯರ ಮೇಲಿನ ಕೌಟುಂಬಿಕ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ವಿವಿಧ ಪ್ರಕರಣಗಳಲ್ಲಿ ದೂರು ನೀಡಲು ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಆಯೋಗಕ್ಕೆ ದೂರು ಸಲ್ಲಿಸಲು ಜಿಲ್ಲಾ ಹಂತದಲ್ಲಿ ವ್ಯವಸ್ಥೆಯಾದರೆ ಇನ್ನೂ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿಯೇ ಒಂದು ಸೆಲ್‌ ಸ್ಥಾಪಿಸಿ ಸಿಬ್ಬಂದಿ ನಿಯೋಜಿಸಲಾಗುವುದು. ಇದರಿಂದ ದೂರದ ಬೆಂಗಳೂರಿಗೆ ಬರುವುದೆ ತಪ್ಪಲಿದೆ.

ಬಾಲಕಿಯರು, ಮಹಿಳೆಯರ ಮೇಲೆ ದೌರ್ಜನ್ಯ, ನಾಪತ್ತೆ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು, ಮಹಿಳಾ ಮತ್ತು ಮಕ್ಕಳ ಇಲಾಖೆ, ರೈಲ್ವೆ ಇಲಾಖೆ ಸೇರಿ ಇತರೆ ಇಲಾಖೆಗಳನ್ನು ಒಳಗೊಂಡ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

 

Tags:
error: Content is protected !!