ಬೆಂಗಳೂರು: ಮಹಿಳೆಯರಿಗೆ ನೆರವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಮಹಿಳೆಯರ ಮೇಲಿನ ಕೌಟುಂಬಿಕ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ವಿವಿಧ ಪ್ರಕರಣಗಳಲ್ಲಿ ದೂರು ನೀಡಲು ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲೂ ರಾಜ್ಯ ಮಹಿಳಾ ಆಯೋಗದ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಆಯೋಗಕ್ಕೆ ದೂರು ಸಲ್ಲಿಸಲು ಜಿಲ್ಲಾ ಹಂತದಲ್ಲಿ ವ್ಯವಸ್ಥೆಯಾದರೆ ಇನ್ನೂ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿಯೇ ಒಂದು ಸೆಲ್ ಸ್ಥಾಪಿಸಿ ಸಿಬ್ಬಂದಿ ನಿಯೋಜಿಸಲಾಗುವುದು. ಇದರಿಂದ ದೂರದ ಬೆಂಗಳೂರಿಗೆ ಬರುವುದೆ ತಪ್ಪಲಿದೆ.
ಬಾಲಕಿಯರು, ಮಹಿಳೆಯರ ಮೇಲೆ ದೌರ್ಜನ್ಯ, ನಾಪತ್ತೆ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು, ಮಹಿಳಾ ಮತ್ತು ಮಕ್ಕಳ ಇಲಾಖೆ, ರೈಲ್ವೆ ಇಲಾಖೆ ಸೇರಿ ಇತರೆ ಇಲಾಖೆಗಳನ್ನು ಒಳಗೊಂಡ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…