ರಾಜ್ಯ

ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್‌ ಅಸ್ಥಿತ್ವಕ್ಕೆ ಬರಲಿದೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್‌ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್‌ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ರಾಯಣ್ಣ ಬ್ರಿಗೇಡ್‌ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿಎಸ್‌ವೈ ದೂರಿನ ಮೇರೆಗೆ ಅಮಿತ್‌ ಶಾ ಅವರು, ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್‌ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಜೀವನದಲ್ಲಿ ಬಿಜೆಪಿ ಬಿಟ್ಟು ಇನ್ಯಾವ ಪಕ್ಷಕ್ಕೂ ಹೋಗಲ್ಲ. ಆದರೆ ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣ ಆಗುವವರೆಗೂ ನಾನು ಬಿಜೆಪಿಗೆ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

2 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

2 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

3 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

3 hours ago