ಬೆಂಗಳೂರು: ಪೆಟ್ರೋಲ್ನಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್ಗಳ ಫಲಿತಾಂಶ ನೀಡಿಲ್ಲ ಎಂದು ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಥೆನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ, ವಾಹನಗಳು ರಿಪೇರಿಗೆ ಹೋಗುತ್ತಿವೆ ಎಂದು ದೂರಿದರು. ಅದರ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು ಪ್ರಶ್ನಿಸಿದರು.
ಮಿಶ್ರಣದ ಪ್ರಮಾಣವನ್ನು ಸ್ವತಂತ್ರ ಪ್ರಯೋಗಾಲಯದಲ್ಲೂ ಪರಿಶೀಲಿಸಿದ್ದೇವೆ. ಶೇಕಡಾ 20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಬೇಡಿ ಎಂದು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿಲ್ಲ. ಜನರ ಹಿತಕ್ಕಾಗಿ ದಾಖಲೆಗಳ ಸಮೇತ ವಿಷಯ ಬಹಿರಂಗಪಡಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.
ಕೇಂದ್ರ ಪೆಟ್ರೋಲಿಯಂ ಸಚಿವರು ಈ ಬಗ್ಗೆ ಪ್ರತಿಕ್ರಿಯಿಸಬೇಕು ಎಂದು ಒತ್ತಾಯಿಸಿದ ರಿಜ್ವಾನ್ ಅರ್ಷದ್, ಜನರ ಹಿತ ಕಾಪಾಡಲು ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.




