Mysore
23
scattered clouds
Light
Dark

ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಿಜೆಪಿ ನಾಯಕ ಸಿ.ಟಿ.ರವಿ

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ.

ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.

ಎತ್ತಿನಹೊಳೆ ಯೋಜನೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಅಕ್ರಮದ ವಿರುದ್ಧ ಕ್ರಮಕೈಗೊಳ್ಳಿ. ನೀರಿನ ಲಭ್ಯತೆ, ಪೂರೈಕೆ, ಕೊಟ್ಟ ಭರವಸೆ ಬಗ್ಗೆ ಕೆಲ ಗೊಂದಲಗಳಿವೆ. ಹಾಲಿ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಸ್ಥೆಗಳು, ತಾಂತ್ರಿಕ ಸಂಸ್ಥೆ ನೆರವಿನಿಂದ ಸಮಗ್ರ ಅಧ್ಯಯನ ನಡೆಸಲು ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ ಕುರಿತಂತೆ 7 ಜಿಲ್ಲೆಯ ಜನರ ಪರವಾಗಿ ನಿಮಗೊಂದು ಬಹಿರಂಗ ಪತ್ರ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಡಿಸಿಎಂ ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.