ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ.
ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಎತ್ತಿನಹೊಳೆ ಯೋಜನೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಅಕ್ರಮದ ವಿರುದ್ಧ ಕ್ರಮಕೈಗೊಳ್ಳಿ. ನೀರಿನ ಲಭ್ಯತೆ, ಪೂರೈಕೆ, ಕೊಟ್ಟ ಭರವಸೆ ಬಗ್ಗೆ ಕೆಲ ಗೊಂದಲಗಳಿವೆ. ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಸ್ಥೆಗಳು, ತಾಂತ್ರಿಕ ಸಂಸ್ಥೆ ನೆರವಿನಿಂದ ಸಮಗ್ರ ಅಧ್ಯಯನ ನಡೆಸಲು ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ ಕುರಿತಂತೆ 7 ಜಿಲ್ಲೆಯ ಜನರ ಪರವಾಗಿ ನಿಮಗೊಂದು ಬಹಿರಂಗ ಪತ್ರ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಡಿಸಿಎಂ ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…