Mysore
15
clear sky

Social Media

ಶನಿವಾರ, 24 ಜನವರಿ 2026
Light
Dark

ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ

KJ Jeorge,

*ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ
*ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ

ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ಬೆಸ್ಕಾಂ ಸ್ಥಾಪಿಸಿರುವ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಹೆಚ್ಚುತ್ತಿರುವ ಇವಿ ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ಕೇಂದ್ರಗಳು ಹಾಗೂ ಮೂಲ ಸೌಕರ್ಯ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಬದ್ಧವಾಗಿದೆ. ಅಲ್ಲದೇ, ಇದಕ್ಕೆ ನಮ್ಮ ರಾಜ್ಯದ ‘ಇವಿ ನೀತಿ’ ಹೆಚ್ಚಿನ ಬಲ ತುಂಬಿದೆ. ಇದೀಗ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಲಾಗಿದ್ದು, ಇದರಿಂದ ಕ್ಯಾಬ್‌ ಚಾಲಕರು, ಇವಿ ಬಳಕೆ ಮಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ,”ಎಂದರು.

“ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ (ಜಿ.ಐ.ಝಡ್.) ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಸ್ಟೇಷನ್‌ನಲ್ಲಿ ಸೌರ ವಿದ್ಯುತ್ತನ್ನು ಹಳೆಯ ಕಾರ್ ಬ್ಯಾಟರಿಗಳಲ್ಲಿ ಶೇಖರಣೆ ಮಾಡಲಾಗುತ್ತದೆ. ಹಗಲಿನಲ್ಲಿ ಸೋಲಾರ್‌ ವಿದ್ಯುತ್‌ ಉತ್ಪಾದಿಸಿ ಅದನ್ನು ಬ್ಯಾಟರಿ ವ್ಯವಸ್ಥೆಯ ಸಹಾಯದಿಂದ ದಿನದ 24 ಗಂಟೆಯೂ ಇವಿ ವಾಹನಗಳಿಗೆ ಸರಬರಾಜು ಮಾಡಲಾಗುತ್ತದೆ,” ಎಂದು ಇಂಧನ ಸಚಿವರು ತಿಳಿಸಿದರು.

“ದೇಶದಲ್ಲೇ ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಒಟ್ಟು 5,880 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಈ ವರ್ಷ ಹೊಸದಾಗಿ 140 ಚಾರ್ಜರ್‌ಗಳನ್ನು ಅಳವಡಿಸಲಾಗಿದೆ ” ಎಂದು ವಿವರಿಸಿದರು.

ಚಾರ್ಜಿಂಗ್‌ ಸ್ಟೇಷನ್‌ ವಿಶೇಷತೆಗಳೇನು?
ಇವಿ ಹಬ್‌ನ ವಿಶೇಷತೆಯನ್ನು ವಿವರಿಸಿದ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್‌, “24 ಗಂಟೆಗಳ ಕಾಲ ಇವಿ ಚಾರ್ಜಿಂಗ್‌ ಸೌಲಭ್ಯ ನೀಡುವ ದೇಶದ ಮೊದಲ ಚಾರ್ಜಿಂಗ್‌ ಸ್ಟೇಷನ್‌ ಇದಾಗಿದೆ. ಈ ಹಬ್‌ನಲ್ಲಿ 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು 5 ಸ್ಲೋ ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಒಟ್ಟು 23 ಚಾರ್ಜಿಂಗ್ ಪಾಯಿಂಟ್‌ಗಳಿವೆ. ನಮ್ಮ ಬೆಸ್ಕಾಂ ಕೈಗೆಟುಕುವ ದರದಲ್ಲಿ ಇವಿ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿದೆ. ಖಾಸಗಿಯವರ ಚಾರ್ಚಿಂಗ್‌ ದರ ನಮ್ಮ ಸ್ಟೇಷನ್‌ಗೆ ಹೋಲಿಸಿದರೆ 2-3 ಪಟ್ಟು ಹೆಚ್ಚಿದೆ,”ಎಂದು ಮಾಹಿತಿ ನೀಡಿದರು.

ಚಾರ್ಚ್‌ ಮಾಡುವುದು ಹೇಗೆ?
ಬೆಸ್ಕಾಂನ ಇವಿ ಮಿತ್ರ ಅಪ್ಲಿಕೇಷನ್‌ನಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಳ, ದರ, ಲಭ್ಯವಿರುವ ಸ್ಲಾಟ್‌ಗಳು ಎಂಬ ಮಾಹಿತಿ ಪಡೆಯಬಹುದು. ಅಥವಾ ಸ್ಟೇಷನ್‌ನಲ್ಲಿರುವ ಕ್ಯೂರ್‌ಕೋಡ್‌ ಸ್ಕ್ಯಾನ್ ಮಾಡಿ, ವಾಟ್ಸಪ್‌ಮೂಲಕವೂ ಹಣ ಪಾವತಿಸಿ ಚಾರ್ಜ್‌ ಮಾಡಬಹುದು.
Google Play Store: https://play.google.com/store/apps/details?id=com.bescom.evmithra&pcampaignid=web_share
Apple Play Store:https://apps.apple.com/us/app/bescom-ev-mithra/id6633439725?uo=2

ದರ:
ಎಸಿ-001-ಪ್ರತಿ ಯೂನಿಟ್‌ಗೆ 7.02 ರೂ.
ಡಿಸಿ-001-ಪ್ರತಿ ಯೂನಿಟ್‌ಗೆ 7.16 ರೂ.
ಸಿಸಿಎಸ್‌-2-ಪ್ರತಿ ಯೂನಿಟ್‌ಗೆ 7.83 ರೂ.

Tags:
error: Content is protected !!