ರಾಜ್ಯ

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

ಬೆಂಗಳೂರು: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ ನಡೆಯಲಿದೆ” ಎಂದರು.

“ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಸರ್ಕಾರಿ ನೌಕರರು, ವಿಶೇಷವಾಗಿ ಸಚಿವಾಲಯ ನೌಕರರಿಗೆ ಮಾರಾಟಗಾರರಿಂದ ರಿಯಾಯ್ತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ. ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಏರುತ್ತಿರುವ ವಾಹನಗಳ ಇಂಧನ ದರ, ನಗರದ ವಾಯುಮಾಲಿನ್ಯ ತಡೆಗೆ ಇವಿ ವಾಹನಗಳ ಬಳಕೆಯೇ ಪರಿಹಾರ. ಇಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ಸಹ ಇರುವುದಿಲ್ಲ. ಸಚಿವಾಯ ನೌಕರರಿಗೆ ಡೌನ್‌ಪೇಮೆಂಟ್‌ ಇಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ. ಮೇಳದಲ್ಲಿ ಭಾಗವಹಿಸಲು ಇವಿ ಸಂಸ್ಥೆಗಳು ಆಸಕ್ತಿ ತೋರಿದ್ದು, ಈ ಮಾರಾಟ ಕೇವಲ ಮೇಳಕ್ಕೆ ಸೀಮಿತವಾಗಿರದೇ ಮುಂದಿನ ದಿನಗಳಲ್ಲೂ ವಿಶೇಷ ಮಾರಾಟ ಮುಂದುವರಿಸಲಿದ್ದಾರೆ” ಎಂದು ವಿವರಿಸಿದರು.

“ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಇಂಧನ ಇಲಾಖೆ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿರುವುದನ್ನು ಸ್ಮರಿಸಬಹುದು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇವಿ ವಾಹನಗಳ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಹಾಗೂ ಇವಿ ಮಿತ್ರ ಆ್ಯಪ್‌ ಪ್ರಯೋಜನ ಪಡೆಯುವಂತೆ ವಿನಂತಿಸುತ್ತೇನೆ” ಎಂದರು.

ವಿಶೇಷ ಇವಿ ಮೇಳ ಆಯೋಜಿಸುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ, ಮೇಳಕ್ಕೆ ಸಂಘದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್‌, ಹಿರಿಯ ಅಧಿಕಾರಿಗಳು, ಸಚಿವಾಲಯ ನೌಕರರ ಸಂಘದ ಪದಾಧಿಕಾರಿಗಳು, ಇವಿ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

6 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

15 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

50 mins ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

1 hour ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

1 hour ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

1 hour ago