Mysore
21
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

Dhanush Tanya topers sslc

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ.

ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕøತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಏ.7 ರಂದು ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಏ.8ರಂದು ಸಹಾಯಕ ಮೌಲ್ಯಮಾಪಕರು ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಬೇಕು. ಮೌಲ್ಯಮಾಪಕರ ನೇಮಕಾತಿ ಆದೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ತೃತೀಯ ಭಾಷೆಗಳ ಮೌಲ್ಯಮಾಪಕರು ಏ.8ರಂದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಬೇಕಿದೆ. ಮೌಲ್ಯಮಾಪನ ಕಾರ್ಯವು ಶಿಕ್ಷಣ ಕಾಯ್ದೆ ಪ್ರಕಾರ ಕಡ್ಡಾಯವಾಗಿದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಆಯಾ ಜಿಲ್ಲೆಯ ಉಪ ನಿರ್ದೇಶಕರು ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯ ನೋಡೆಲ್ ಅಧಿಕಾರಿಗಳು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಮತ್ತು ಮೌಲ್ಯಮಾಪನ ಕಾರ್ಯದ ಉಸ್ತುವಾಗಿ ಹಾಗೂ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಲಾಗಿದೆ.

 

 

Tags:
error: Content is protected !!