Dhanush Tanya topers sslc
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ.
ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕøತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಏ.7 ರಂದು ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಏ.8ರಂದು ಸಹಾಯಕ ಮೌಲ್ಯಮಾಪಕರು ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಬೇಕು. ಮೌಲ್ಯಮಾಪಕರ ನೇಮಕಾತಿ ಆದೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ತೃತೀಯ ಭಾಷೆಗಳ ಮೌಲ್ಯಮಾಪಕರು ಏ.8ರಂದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಬೇಕಿದೆ. ಮೌಲ್ಯಮಾಪನ ಕಾರ್ಯವು ಶಿಕ್ಷಣ ಕಾಯ್ದೆ ಪ್ರಕಾರ ಕಡ್ಡಾಯವಾಗಿದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.
ಆಯಾ ಜಿಲ್ಲೆಯ ಉಪ ನಿರ್ದೇಶಕರು ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯ ನೋಡೆಲ್ ಅಧಿಕಾರಿಗಳು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಮತ್ತು ಮೌಲ್ಯಮಾಪನ ಕಾರ್ಯದ ಉಸ್ತುವಾಗಿ ಹಾಗೂ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…