ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕೆಲ ಸಮಯ ಚರ್ಚೆ ನಡೆಸಿದ್ದರು.
ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದು ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ನಿನ್ನೆ ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ್ದರು. ಸಂಜೆ ವೇಳೆಗೆ ದೆಹಲಿಗೆ ವಾಪಸ್ ಹೋಗುವಾಗ ಮೈಸೂರಿನ ಏರ್‌ಪೋರ್ಟ್‌ಗೆ ಬಂದಿದ್ದ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದರು.




