ರಾಜ್ಯ

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ‌. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಇದನ್ನು ಓದಿ: ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌ 

ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಲಾಡ್ಲಿ ಬೆಹೆನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು‌ ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

18 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

21 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

23 mins ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

3 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

3 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago