ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ನಾಯಕರು ಪ್ರಸ್ತುತ ಈ ಕೆಳಗಿನ ಚಿಂತೆಗಳಲ್ಲಿ ಮುಳುಗಿದ್ದಾರೆ. ಸಿಎಂ ಸಿದ್ದರಾಮಯ್ಯ – ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳುವ ಚಿಂತೆ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಹೇಗೆ ಎಂಬ ಚಿಂತೆ ಎಂದು ವ್ಯಂಗ್ಯವಾಡಿದೆ.
ಪ್ರಿಯಾಂಕ್ ಖರ್ಗೆ – ಸಿದ್ದರಾಮಯ್ಯರವರ ಕೆ.ಇ.ಎ. ಪರೀಕ್ಷಾ ಅಕ್ರಮವನ್ನು ಸಿಬಿಐಗೆ ವಹಿಸಿದರೆ ಏನು ಮಾಡುವುದೆಂಬ ಚಿಂತೆ, ಡಾ.ಪರಮೇಶ್ವರ್ ತಮ್ಮ ಸಿಎಂ ಆಸೆಗೆ ಡಿ.ಕೆ.ಶಿವಕುಮಾರ್ ತಣ್ಣೀರೆರಚಿದರೆ ಏನು ಮಾಡುವುದು ಎಂಬ ಚಿಂತೆ, ಕಾಂಗ್ರೆಸ್ ನಾಯಕರೆಲ್ಲರೂ ತಮ್ಮ ಸ್ವಾರ್ಥದ ರಾಜಕಾರಣದ ಬಗ್ಗೆ ಚಿಂತಿಸುತ್ತಿದ್ದಾರೆ ಹೊರತು ಯಾರಿಗೂ ರಾಜ್ಯದ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆರೋಪ ಮಾಡಿದೆ.
ಮತ್ತೊಂದು ಟ್ವೀಟ್‍ನಲ್ಲಿ 508 ಕೋಟಿಯ ಭರ್ಜರಿ ಲಂಚ ಪಡೆದು ಕಾಂಗ್ರೆಸ್ ಆಡಳಿತದ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಿಕ್ಕಿಬಿದ್ದಿದ್ದಾರೆ. ಇದರಲ್ಲಿ ಕರ್ನಾಟಕದ ಪಾಲು ಎಷ್ಟು ಕಳುಹಿಸಲಾಗಿತ್ತು ಎಂಬುದನ್ನೂ ಕಾಂಗ್ರೆಸ್ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ತೆಲಂಗಾಣದಲ್ಲೂ ಚುನಾವಣೆ ಘೋಷಣೆಯ ಬಳಿಕ ಡಿ.ಕೆ.ಶಿವಕುಮಾರ್ ಆಪ್ತರ ಮನೆಯಲ್ಲೂ ಸೇರಿ ಈಗಾಗಲೇ 40 ಕೋಟಿಗೂ ಅಕ ಜಪ್ತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಗುತ್ತಿಗೆದಾರರು ಮತ್ತು ಬಿಲ್ಡರ್‌ಗಳ ಬಳಿ ಬಚ್ಚಿಟ್ಟಿದ್ದ ನೂರು ಕೋಟಿಗೂ ಅಧಿಕ, ಜತೆಗೆ ಪಂಚರಾಜ್ಯಗಳಿಗೆ ಕಾಂಗ್ರೆಸ್ ಇನ್ನೆಷ್ಟು ಕಳಿಸಿದೆ ಎಂಬುದನ್ನು ಸಿಎಂ ಮತ್ತು ಮುಖ್ಯಮಂತ್ರಿಯಾಗುವ ಅಭಿಲಾಷೆಯಲ್ಲಿರುವ ಎಲ್ಲರೂ ಮೊದಲು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸವಾಲು ಹಾಕಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…