ರಾಜ್ಯ

ಸರ್ಕಾರದಲ್ಲಿ ಎಲ್ಲರೂ ಭ್ರಷ್ಟರಾದರೆ ಶಾಸಕ ಸತೀಶ್‌ ಸೈಲ್‌ರ ಸ್ಥಿತಿ ಎದುರಾಗಲಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಎಲ್ಲರೂ ಭ್ರಷ್ಟರಾದರೆ ಶಾಸಕ ಸತೀಶ್‌ ಸೈಲ್‌ರ ಸ್ಥಿತಿ ಎದುರಾಗಲಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ಈ ವಿಚಾರವಾಗಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ತಿಳಿಸಿದ್ದಾರೆ.

ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ನ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ. ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು. ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

5 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

8 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago