Mysore
19
scattered clouds
Light
Dark

ಬೆಂಗಳೂರಿನಲ್ಲಿ ಪ್ರತಿ ಗಂಟೆಗೂ ಇಬ್ಬರಲ್ಲಿ ಡೆಂಗ್ಯೂ ಪತ್ತೆ

ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್‌ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್‌ ಕಿಟ್‌ ಕೊರತ ಎದುರಾಗಿದೆ. ಸದ್ಯ ಇದೇ ವಿಚಾರ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.

ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿ ೨ ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ ೬ ತಿಂಗಳಲ್ಲಿ ೬೯೦೦ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್‌ ಗೆ ಒಳಗಾಗಿದ್ದಾರೆ. ಈ ಪೈಕಿ ೨೪೫೭ ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.

ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕವನ್ನುಂಟು ಮಾಡಿದೆ.