Mysore
30
few clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರು ಬದ್ಧರಾಗಿರಬೇಕು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ. ಅಂತಿಮವಾಗಿ ಹೈಕಮಾಂಡ್‌ ತೀರ್ಮಾನ ಮಾಡಲಿದೆ. ನನ್ನನ್ನು ಸೇರಿ ಎಲ್ಲರೂ ಹೈಕಮಾಂಡ್‌ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದು ಸ್ಪಷ್ಟಪಡಿಸಿದರು.

ಬಿ ಖಾತಾ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಸರ್ಕಾರಕ್ಕೆ ಕಂದಾಯ ಕಟ್ಟುತ್ತಿರಲಿಲ್ಲ. ಅದಕ್ಕಾಗಿ ಬಿ ಖಾತಾ ಅಭಿಯಾನ ಮಾಡಿದ್ದೇವೆ. ಈಶ್ವರ್‌ ಖಂಡ್ರೆ ನೇತೃತ್ವದ ಸಮಿತಿಯಿಂದ ರಾಜ್ಯದಲ್ಲಿ ಒಂದು ಕಾನೂನು ಮಾಡಿದ್ದೇವೆ. ರೆವಿನ್ಯೂ ಬಡಾವಣೆ, ಸೈಟ್‌ಗಳಿಗೆ ಸರ್ಕಾರ ಸೌಲಭ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

 

Tags:
error: Content is protected !!