ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ನನ್ನನ್ನು ಸೇರಿ ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದು ಸ್ಪಷ್ಟಪಡಿಸಿದರು.
ಬಿ ಖಾತಾ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಸರ್ಕಾರಕ್ಕೆ ಕಂದಾಯ ಕಟ್ಟುತ್ತಿರಲಿಲ್ಲ. ಅದಕ್ಕಾಗಿ ಬಿ ಖಾತಾ ಅಭಿಯಾನ ಮಾಡಿದ್ದೇವೆ. ಈಶ್ವರ್ ಖಂಡ್ರೆ ನೇತೃತ್ವದ ಸಮಿತಿಯಿಂದ ರಾಜ್ಯದಲ್ಲಿ ಒಂದು ಕಾನೂನು ಮಾಡಿದ್ದೇವೆ. ರೆವಿನ್ಯೂ ಬಡಾವಣೆ, ಸೈಟ್‌ಗಳಿಗೆ ಸರ್ಕಾರ ಸೌಲಭ್ಯಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…