ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಖಕು. ಸರ್ಕಾರದಲ್ಲಿ ಗುಂಪುಗಳಿಲ್ಲದೇ ಕೆಲಸ ಮಾಡಬೇಕು. ನಮ್ಮೊಳಗೆ ವಿರೋಧ ಮಾಡುವುದು ಸರಿಯಲ್ಲ. ಬಿಜೆಪಿ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು.
ಈ ಮೂಲಕ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ರಾಜಕಾರಣ ಮಾಡುತ್ತಿರುವವರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದ್ದು, ಶಾಸಕರ ಬಂಡಾಯ ಶಮನ ಮಾಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.





