ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಕೂಡ ಇದೆ. ಆ ನೋವು ಯಾರ ಹತ್ತಿರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ಧಾಂತದ ಪ್ರಕಾರ ಎಲ್ಲವೂ ಸರಿ ನಡೆದರೆ ಪಕ್ಷಕ್ಕೆ ಬರುವೆ ಎಂದರು.
ಇನ್ನು ಬಿಜೆಪಿ ಮನೆಯೊಂದು ಆರು ಬಾಗಿಲು ಎಂಬ ಎಂಬ ಕಾಂಗ್ರೆಸ್ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಒಂದೇ ಇದೆ. ಅದೇ ಕಾಂಗ್ರೆಸ್ ಎಷ್ಟು ಇದೆ ಎಂದರೆ ನೂರಾರು ಇದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಒಂದೇ ಬಾಗಿಲು ಇದೆಯಾ? ಅವರ ಪಕ್ಷದ ಬಾಗಿಲುಗಳನ್ನು ಲೆಕ್ಕ ಹಾಕಲಿ ಎಂದು ತಿರುಗೇಟು ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ತಂದೆ-ಮಕ್ಕಳ ಪಕ್ಷ ಆಗಿದೆ. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದು ಪಕ್ಷದ ಆಂತರಿಕ ವಿಚಾರ ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…