Mysore
20
overcast clouds
Light
Dark

ಅವನೊಬ್ಬ ತಲೆ ತಿರುಕ: ಡಿಕೆಶಿ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಹಾಸನ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮುಸ್ಲೀಂ ಬಾಂಧವರಿಗೆ ಚಿತ್ರಹಿಂಸೆ ನೀಡಿ ದೇಶ ಬಿಟ್ಟು ಓಡಿಸುವ ಕೆಲಸ ಮಾಡಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆಗೆ ಗರಂ ಆಗಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಏಕ ವಚನದಲ್ಲೇ ಡಿಕೆಶಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಬ್ಬ ತಲೆ ತಿರುಕನಾಗಿದ್ದು, ಅವನ ಮಾತನ್ನು ನಂಬುವ ಅವಶ್ಯಕತೆಯಿಲ್ಲ. ಕ್ಷುಲ್ಲಕ ಕಾರಣಗಳನ್ನು ನೀಡಿ ಮಸ್ಲೀಮರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದಾನೆ. ಬಿಜೆಪಿ ಎಂದಿಗೂ ಹಿಂದು, ಮುಸ್ಲಿಂ, ಕ್ರಿಶ್ಚಿಯನ್‌ ಎಂದು ಬೇಧ ಭಾವ ಮಾಡಿಲ್ಲ. ನಮಗೆ ಎಲ್ಲರೂ ಒಂದೇ ಆಗಿದ್ದಾರೆ. ಹಾಗಾಗಿ ಡಿಕೆಶಿ ಮಾತಿಗೆ ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ.

ಇನ್ನು ಹಾಸನ ಲೋಕಸಭಾ ಕ್ಷೇತ್ರದ ವಿಷಯಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಮೋದಿ ಅಲೆಯಿದೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಕನಿಷ್ಟ 2 ಲಕ್ಷ ಅಂತರದ ಮತಗಳಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿನ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಮತ್ತೆ ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.