Mysore
26
light rain

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

ಮಾಜಿ ಸಿಎಂ ಎಸ್‌ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಂದು (ಏ.29) ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆ ಮೂಲಗಳ ಪ್ರಕಾರ ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಈ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿ, ಆರೋಗ್ಯದ ವಿವರ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಏಪ್ರಿಲ್‌ 22 ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನಲೆ ಎಸ್‌ಎಂ ಕೃಷ್ಣ ಅವರು ಆಸ್ಪತ್ರೆ ಸೇರಿ ಡಿಸ್ಚಾರ್ಜ್‌ ಆಗಿದ್ದರು. ಇದೀಗ ಇಂದು ಅವರ ಆರೋಗ್ಯವದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags:
error: Content is protected !!