ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.
ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಅಭಿಮನ್ಯುವಿಗೆ ನಾಡಿನಾದ್ಯಂತ ದೊಡ್ಡ ಅಭಿಮಾನಿ ಬಳಗವೇ ಇದೆ. ಏಕಾ ಏಕಿ ಅಭಿಮನ್ಯುವನ್ನು ದಸರಾ ಮಹೋತ್ಸವದಿಂದ ಹೊರಗಿಡುವ ಬದಲು ನಿಶಾನೆ ಆನೆಯಾಗಿ ಬಳಸಿ, ಗೌರವಪೂರ್ವಕವಾಗಿ ಹಾಗೂ ರಾಜೋಚಿತವಾಗಿ ಬೀಳ್ಕೊಡುಗೆ ನೀಡಬೇಕು ಎಂದು ಕೋರಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯೇ ವಿಜಯದಶಮಿ ಜಂಬೂಸವಾರಿ. ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಬಗ್ಗೆ ರಾಜ್ಯದ ಜನತೆಗೆ ಅವಿನಾಭಾವ ಸಂಬಂಧವಿದೆ. ಚಿನ್ನದಂಬಾರಿ ಹೊರುವ ಆನೆಗಳ ಬಗ್ಗೆಯಂತೂ ವಿಶೇಷ ಪ್ರೀತಿ ಇದೆ. ಬಾರಿ ದಸರಾ ಮಹೋತ್ಸವದಿಂದ ಕ್ಯಾಪ್ಟನ್ ಅಭಿಮನ್ಯುವನ್ನು ಕೈಬಿಟ್ಟಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಾಗರಹೊಳೆಯ ಮತ್ತಿಗೋಡು ಶಿಬಿರದ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವುದಲ್ಲದೆ, 6 ಬಾರಿ ಅಂಬಾರಿಹೊತ್ತು ರಾಜ್ಯದ ಜನರ ಹೃದಯದಲ್ಲಿ ನೆಲೆಸಿದ್ದಾನೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
1968ರಲ್ಲಿ ಕಾಕನಕೋಟೆ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ. 60 ವರ್ಷ ತುಂಬಿದ ಬಳಿಕವೂ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ. ಅದೇ ರೀತಿ ಬಲರಾಮ ಕೂಡ ಪಾಲ್ಗೊಂಡಿದ್ದ. ಈ ಗೌರವವನ್ನು ಅಭಿಮನ್ಯುವಿಗೂ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡುವಂತೆ ಕೋರಿದ್ದಾರೆ.
ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು…
ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ…
ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.…
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ…
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್ನಲ್ಲಿ…