ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ.
ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ ನಡೆಸಿದ ಕೆಲ ಸಮಯದ ಬಳಿಕ ದಿಢೀರ್ ನಾಗೇಂದ್ರ ಅವರನ್ನು ಇಡಿ ಬಂಧಿಸಿ ಕರೆದೊಯ್ಯಿತು.
ನಾಗೇಂದ್ರ ಅವರನ್ನು ಸ್ವಗೃಹದಲ್ಲಿ ಬಂಧಿಸಿ ಅಲ್ಲಿಂದ ನೇರವಾಗಿ ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ಯಲಾಗಿದೆ.
ಬುಧವಾರಷ್ಟೇ ನಾಗೇಂದ್ರ, ದದ್ದಲ್ ಹಾಗೂ ಅವರ ಆಪ್ತರ ಮನೆಗಳಿಗೆ, ಕಚೇರಿಗೆ ಇಡಿ ದಾಳಿ ನಡೆಸಿ ಅಗತ್ಯ ದಾಖಲೆಗಳು, ಮಾಹಿತಿಯನ್ನು ಪಡೆದು ತೆರಳಿತ್ತು. ಇದಾದ ಎರಡೇ ದಿನಗಳಲ್ಲಿ ನಾಗೇಂದ್ರ ಅವರನ್ನು ಬಂಧಿಸಿದ್ದು, ನಿಗಮದ ಹಗರಣ ಸಂಬಂಧ ಬಿಗ್ ಟ್ವಿಸ್ಟ್ ಉಂಟಾಗಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…