ಬೆಂಗಳೂರು: ನಾಳೆ, ನಾಡಿದ್ದು PDO ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ ನಾಳೆ ಮಧ್ಯಾಹ್ನ 2 ರಿಂದ 4ರವರೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು.
ಡಿಸೆಂಬರ್.8ರಂದು ಬೆಳಿಗ್ಗೆ 10 ರಿಂದ 11.30 ಜಿ.ಕೆ ಹಾಗೂ ಮಧ್ಯಾಹ್ನ 2ರಿಂದ 4ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಪ್ರತಿಬಂಧಿಸಿವೆ. ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.