ಬೆಂಗಳೂರು: ನಾಳೆ, ನಾಡಿದ್ದು PDO ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ ನಾಳೆ ಮಧ್ಯಾಹ್ನ 2 ರಿಂದ 4ರವರೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು.
ಡಿಸೆಂಬರ್.8ರಂದು ಬೆಳಿಗ್ಗೆ 10 ರಿಂದ 11.30 ಜಿ.ಕೆ ಹಾಗೂ ಮಧ್ಯಾಹ್ನ 2ರಿಂದ 4ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಪ್ರತಿಬಂಧಿಸಿವೆ. ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್…
ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ…
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…