ರಾಜ್ಯ

ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ : ಪ್ರಾಚ್ಯಾವಶೇಷಗಳು ಪತ್ತೆ

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.

ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ ದೊರೆತಿದ್ದು, ತಜ್ಞರ ಪರಿಶೀಲನೆಯ ನಂತರ ಇದು ಶಿಲಾಯುಗದ ಮಾನವರು ಬೇಟೆ ಅಥವಾ ರಕ್ಷಣಾ ಉದ್ದೇಶಕ್ಕಾಗಿ ಬಳಸುತ್ತಿದ್ದ ಕಲ್ಲಿನ ಕೊಡಲಿ ಎಂಬುದು ಸ್ಪಷ್ಟವಾಗಿದೆ.

ಶೋಧನಾ ಕಾರ್ಯದಲ್ಲಿ ಶಿಲಾಯುಗಕ್ಕೆ ಸೇರಿದ ಅತ್ಯಂತ ಪ್ರಾಚೀನ ಕಲ್ಲಿನ ಆಯುಧ ಪತ್ತೆಯಾಗಿರುವ ಬೆನ್ನಲ್ಲೇ, ಇದೀಗ ಉತ್ಖನನ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿರುವ ಕೋಟೆ ಗೋಡೆಯಲ್ಲಿ ಹುದುಗಿ ಹೋಗಿದ್ದ ಅಪಾರ ಪ್ರಮಾಣದ ಪ್ರಾಚ್ಯಾವಶೇಷಗಳು ಬೆಳಕಿಗೆ ಬಂದಿವೆ.

ಲಕ್ಕುಂಡಿಯ ಕಲಾತ್ಮಕ ಶ್ರೀಮಂತಿಕೆಯನ್ನು ಸಾರುವಂತೆ ಒಂದೊಂದು ಶಿಲೆಯೂ ಸುಂದರ ಶಿಲ್ಪಕಲೆಗಳನ್ನು ಹೊತ್ತಿದ್ದು, ಇತಿಹಾಸಾಸಕ್ತರು ಹಾಗೂ ಸಂಶೋಧಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ಈ ಶಿಲೆಗಳು, ಪ್ರಾಚೀನ ದೇವಾಲಯಗಳಲ್ಲಿ ಬಳಸಲಾಗಿದ್ದ ಅಪೂರ್ವ ಕಲಾಕೃತಿಗಳನ್ನು ಪ್ರತಿಬಿಂಬಿಸುತ್ತಿವೆ ಎನ್ನಲಾಗಿದೆ.

ಈ ಅನ್ವೇಷಣೆ ರಾಜ್ಯದ ಜನರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ಕಲೆಗಳ ಶ್ರೀಮಂತ ನಾಡು ಎಂಬ ಖ್ಯಾತಿಯನ್ನು ಲಕ್ಕುಂಡಿ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ಚಿನ್ನದಲ್ಲಿ ಮಾತ್ರವಲ್ಲ, ಕಲೆಗಳಲ್ಲೂ ಅಪಾರ ಶ್ರೀಮಂತಿಕೆ ಹೊಂದಿರುವ ಈ ನೆಲದ ಮಹತ್ವವನ್ನು ಈ ಶಿಲ್ಪಕಲೆಗಳು ಸಾರುತ್ತಿವೆ.

ಈ ಅಮೂಲ್ಯ ವಸ್ತು ಪತ್ತೆಯಾದ ತಕ್ಷಣ, ಉತ್ಖನನ ಮೇಲ್ವಿಚಾರಕರು ಅದನ್ನು ಸೂಕ್ಷ್ಮವಾಗಿ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ಮುಚ್ಚಿ, ಹಾನಿಯಾಗದಂತೆ ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ. ಆಯುಧದ ಮೇಲೆ ಶೋಧ ದಿನಾಂಕ ಮತ್ತು ವಿವರಗಳು ಟ್ಯಾಗ್‌ ಮೂಲಕ ಲೇಬಲ್‌ ಮಾಡಲಾಗಿದ್ದು, ಭವಿಷ್ಯದಲ್ಲಿ ಅದನ್ನು ಅಧ್ಯಯನ ಮತ್ತು ಪ್ರದರ್ಶನಕ್ಕಾಗಿ ಉಪಯೋಗಿಸಲು ಸಿದ್ಧಪಡಿಸಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago