Mysore
24
scattered clouds

Social Media

ಶನಿವಾರ, 17 ಜನವರಿ 2026
Light
Dark

ಮದ್ಯಕ್ಕೆ ಲೈಸನ್ಸ್‌ | 25 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಅಬಕಾರಿ ಡಿಸಿ

ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 80 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ರೂ. ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧಿಕ್ಷಕ ತಮ್ಮಣ್ಣ, ಮಧ್ಯವರ್ತಿ ಹಾಗೂ ಅಬಕಾರಿ ಇಲಾಖೆಯ ಕಾನ್‌ಸ್ಟೇಬಲ್ ಲಕ್ಕಪ್ಪ ಎಂಬವರನ್ನೂ ಬಂಧಿಸಲಾಗಿದೆ.

ದೂರುದಾರ ಲಕ್ಷ್ಮೀನಾರಾಯಣ ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಲಕ್ಷ್ಮೀನಾರಾಯಣ ಅವರ ಪ್ರಕಾರ, ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಆರಂಭದಲ್ಲಿ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನಂತರ ಈ ಮೊತ್ತವನ್ನು 2.25 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿತ್ತು. ಕೊನೆಗೆ 75 ಲಕ್ಷ ರೂಪಾಯಿಗೆ ಬಂದು ನಿಂತಿದ್ದು, ಮೊದಲ ಕಂತಿನ 25 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಲಾಗಿತ್ತು. ಈ ಹಣವನ್ನು ಹೊಂದಿಸಲು ತಾನು ಸ್ನೇಹಿತರಿಂದ ಸಾಲ ಪಡೆದಿದ್ದೆ ಎಂದು ಹೇಳಿದ್ದಾರೆ.

Tags:
error: Content is protected !!